ಕೇಜ್ರಿವಾಲ್ ಪ್ರಕರಣದಲ್ಲಿ ನ್ಯಾಯಯುತ, ಪಾರದರ್ಶಕ ಕಾನೂನು ಪ್ರಕ್ರಿಯೆ ನಡೆಯಲಿ: ಅಮೆರಿಕ
Update: 2024-03-26 16:07 IST
ಅರವಿಂದ್ ಕೇಜ್ರಿವಾಲ್ | Photo: PTI
ಹೊಸದಿಲ್ಲಿ : ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕಾದ ಸ್ಟೇಟ್ ಇಲಾಖೆ ವಕ್ತಾರ, ಕೇಜ್ರಿವಾಲ್ ಪ್ರಕರಣ ಕುರಿತಂತೆ ಅವರಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸರಿಯಾದ ಸಮಯದಲ್ಲಿ ಕಾನೂನಾತ್ಮಕ ಪ್ರಕ್ರಿಯೆ ನಡೆಯುವುದೆಂದು ಆಶಿಸುತ್ತೇವೆ ಎಂದು ಹೇಳಿದೆ.
ಜರ್ಮನ್ ವಿದೇಶ ಸಚಿವರ ಹೇಳಿಕೆಗೆ ಭಾರತ ಸರ್ಕಾರ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರರು ಭಾರತ ಸರ್ಕಾರದ ಜೊತೆ ನಡೆಸಿದ ಚರ್ಚೆಗಳ ಕುರಿತು ಜರ್ಮನ್ ವಿದೇಶ ಸಚಿವರನ್ನು ಕೇಳಿ ಎಂದಷ್ಟೇ ಹೇಳಿದ್ದಾರೆ.