×
Ad

ನೀಟ್ ಹಗರಣದ ಕುರಿತು ಚರ್ಚೆಗೆ ವಿಪಕ್ಷಗಳ ಪಟ್ಟು: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

Update: 2024-06-28 15:22 IST

Screengrab:X/ANI

ಹೊಸದಿಲ್ಲಿ: ನಿಯಮ 267ರ ಅಡಿ ನೀಟ್ ಹಗರಣ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆ ನಡೆಸಬೇಕು ಎಂದು ಶುಕ್ರವಾರ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ ಸೃಷ್ಟಿಸಿದ ಪರಿಣಾಮ, ಲೋಕಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕರಿಸುವ ಸಂದರ್ಭದಲ್ಲಿ ವಿಪಕ್ಷಗಳ ಸಂಸದರು ತಮ್ಮ ನಿಲುವುಗಳ ಕುರಿತು ಎಚ್ಚರಿಕೆ ವಹಿಸಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಒತ್ತಾಯಿಸಿದರೂ, ಕಲಾಪದುದ್ದಕ್ಕೂ ವಿಪಕ್ಷಗಳ ಸದಸ್ಯರ ಘೋಷಣೆಗಳು ಸ್ಥಗಿತಗೊಳ್ಳಲಿಲ್ಲ ಹಾಗೂ ಸದನದಲ್ಲಿ ಗದ್ದಲ ಮುಂದುವರಿಯಿತು. ಹೀಗಾಗಿ ಲೋಕಸಭಾ ಕಲಾಪಗಳನ್ನು ಜುಲೈ 1ರ ಬೆಳಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ.

18ನೇ ಲೋಕಸಭಾ ಕಾರ್ಯಕಲಾಪಗಳು ಅಧಿಕೃತವಾಗಿ ಪ್ರಾರಂಭಗೊಂಡ ದಿನವೇ ವಿಪಕ್ಷಗಳು ಹಾಗೂ ಆಡಳಿತಾರೂಢ ಸಂಸದರ ನಡುವೆ ಗಂಭೀರ ವಾಗ್ಯುದ್ಧಕ್ಕೆ ಸಾಕ್ಷಿಯಾಯಿತು. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿಗಳು ಮಾಡಿದ್ದ ಭಾಷಣದ ಕುರಿತ ಚರ್ಚೆಯನ್ನು ಮೊದಲಿಗೆ ಕೈಗೆತ್ತಿಕೊಳ್ಳಲು ಸರಕಾರ ಬಯಸಿದರೆ, ನೀಟ್ ಹಗರಣ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಮೊದಲು ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದವು. ಇದರಿಂದ ಸದನದಲ್ಲಿ ಗದ್ದಲ ಸೃಷ್ಟಿಯಾಗಿದ್ದರಿಂದ ಲೋಕಸಭಾ ಕಲಾಪವನ್ನು ಸೋಮವಾರದವರೆಗೆ ಮುಂದೂಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News