×
Ad

ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಕರಡು ವರದಿಯನ್ನು ಲೋಕಸಭೆ ಸ್ಪೀಕರ್ ಗೆ ಸಲ್ಲಿಸಿದ ಜಂಟಿ ಸಂಸದೀಯ ಸಮಿತಿ

Update: 2025-01-30 14:34 IST

PC : ANI 

ಹೊಸದಿಲ್ಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಕರಡು ವರದಿಯನ್ನು ಜಂಟಿ ಸಂಸದೀಯ ಸಮಿತಿಯು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಸಂಸದೀಯ ಸಮಿತಿಯ ಅಧ್ಯಕ್ಷರಾದ ಜಗದಾಂಬಿಕಾ ಪಾಲ್ ಅವರು ಸಂಸತ್ ಭವನದ ಕಚೇರಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ವರದಿಯನ್ನು ಹಸ್ತಾಂತರಿಸಿದ್ದಾರೆ.

ಜಂಟಿ ಸಂಸದೀಯ ಸಮಿತಿಯು ನಿನ್ನೆ ವಕ್ಫ್(ತಿದ್ದುಪಡಿ) ಮಸೂದೆ ಕುರಿತ ಕರಡು ವರದಿಯನ್ನು ಅಂಗೀಕರಿಸಿದೆ. ಸಮಿತಿಯ 16 ಸದಸ್ಯರು ಕರಡು ಮಸೂದೆ ಪರವಾಗಿ ಮತ ಚಲಾಯಿಸಿದರೆ, 11 ಸದಸ್ಯರು ಮಸೂದೆಯ ವಿರೋಧವಾಗಿ ಮತವನ್ನು ಚಲಾಯಿಸಿದ್ದರು.

ವಕ್ಫ್(ತಿದ್ದುಪಡಿ) ಮಸೂದೆ-2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದ್ದರು. ಮಸೂದೆಯನ್ನು 2024ರ ಆಗಸ್ಟ್ 8ರಂದು ಜಂಟಿ ಸಂಸದೀಯ ಸಮಿತಿಗೆ(ಜೆಪಿಸಿ) ಉಲ್ಲೇಖಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News