×
Ad

ಸಂಸತ್ತಿನ ಗೇಟ್‌ಗಳಲ್ಲಿ ಪ್ರತಿಭಟನೆಗಳನ್ನು ನಿಷೇಧಿಸಿದ ಲೋಕಸಭಾ ಸ್ಪೀಕರ್

Update: 2024-12-19 23:16 IST

PC : ANI 

ಹೊಸದಿಲ್ಲಿ: ರಾಜಕೀಯ ಪ್ರತಿಭಟನೆಗಳು ವಿಕೋಪಕ್ಕೆ ತಿರುಗಿದ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಸಂಸತ್ತಿನ ಯಾವುದೇ ಗೇಟ್‌ಗಳಲ್ಲಿ ಸಂಸದರು ಮತ್ತು ರಾಜಕೀಯ ಪಕ್ಷಗಳ ಪ್ರತಿಭಟನಾ ಪ್ರದರ್ಶನಗಳನ್ನು ನಿಷೇಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ಯಾವುದೇ ರಾಜಕೀಯ ಪಕ್ಷಗಳು, ಸಂಸದರು ಅಥವಾ ಸದಸ್ಯರ ಗುಂಪುಗಳು ಸಂಸತ್ ಭವನದ ಕಟ್ಟಡದ ಗೇಟ್‌ಗಳಲ್ಲಿ ಯಾವುದೇ ಧರಣಿ ಮತ್ತು ಪ್ರತಿಭಟನೆ ನಡೆಸದಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ" ಎಂದು ಸಂಸತ್ತಿನ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಸಂಸತ್ತಿನ ಆವರಣದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಪ್ರತಿಭಟನೆ ನಡೆದ ಬೆನ್ನಿಗೇ ಈ ಸೂಚನೆಗಳು ಬಂದಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News