×
Ad

ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಪಕ್ಷಕ್ಕೆ ಮಹತ್ವದ ಪ್ರಗತಿ: ಕಾಂಗ್ರೆಸ್‌

Update: 2023-10-27 12:36 IST

ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ವರ್ಷ ಪೂರೈಸಿದ್ದಾರೆ. ಕಾಂಗ್ರೆಸ್ ಪಕ್ಷವು ಖರ್ಗೆ ಅವರ ನಾಯಕತ್ವದಲ್ಲಿ ಮಹತ್ವದ ಪ್ರಗತಿ ಸಾಧಿಸಿದೆ. ಅಲ್ಲದೇ ಸಂಘಟನೆಯನ್ನು ಪುನಶ್ಚೇತನಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

'ಹಂತ ಹಂತವಾಗಿ ಉನ್ನತ ಹುದ್ದೆಗೆ ಏರಿದ ಅವರು,

“ಉತ್ಸಾಹ ಮತ್ತು ಪರಿಶ್ರಮದಿಂದ ಏನನ್ನೂ ಸಾಧಿಸಬಹುದು ಎಂಬುದಕ್ಕೆ ಖರ್ಗೆ ಅವರು ಉದಾಹರಣೆ. ಅವರು ಹಂತ ಹಂತವಾಗಿ ಉನ್ನತ ಹುದ್ದೆಗೆ ಏರಿದ್ದಾರೆ” ಎಂದು ಕಾಂಗ್ರೆಸ್ ಹೇಳಿದೆ.

ಕಳೆದ ವರ್ಷ ಅಕ್ಟೋಬರ್ 26ರಂದು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News