×
Ad

ಮಧ್ಯಪ್ರದೇಶ | ಪತಿಯೊಂದಿಗೆ ಪಿಕ್ನಿಕ್‌ಗೆ ತೆರಳಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Update: 2024-10-25 20:58 IST

   ಸಾಂದರ್ಭಿಕ ಚಿತ್ರ

ಭೋಪಾಲ : ತನ್ನ ಪತಿಯೊಂದಿಗೆ ಪಿಕ್ನಿಕ್‌ಗೆ ತೆರಳಿದ್ದ ಮಹಿಳೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುಡ್ ತಾಲೂಕಿನಲ್ಲಿ ಸಂಭವಿಸಿದೆ.

ಘಟನೆಗೆ ಸಂಬಂಧಿಸಿದಂತೆ 100ಕ್ಕೂ ಅಧಿಕ ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಸೋಮವಾರ ಜಿಲ್ಲಾ ಪೋಲಿಸ್ ಮುಖ್ಯಕಚೇರಿಯಿಂದ ಕೇವಲ 20 ಕಿ.ಮೀ.ದೂರದಲ್ಲಿ ಈ ಘಟನೆ ನಡೆದಿತ್ತು.

ಮಹಿಳೆ ಇತ್ತೀಚಿಗಷ್ಟೇ ಮದುವೆಯಾಗಿದ್ದಳು. ಆಕೆ ಮತ್ತು ಆಕೆಯ ಪತಿ 19ರಿಂದ 21 ವರ್ಷ ವಯಸ್ಸಿನವರಾಗಿದ್ದು,ಇನ್ನೂ ಕಾಲೇಜಿನಲ್ಲಿ ಓದುತ್ತಿದ್ದಾರೆ.

ಮಹಿಳೆಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಐವರು ಅಪರಿಚಿತ ದುಷ್ಕರ್ಮಿಗಳನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ ಎಂದು ಡಿಎಸ್‌ಪಿ ಹಿಮಾಲಿ ಪಾಠಕ್ ಸುದ್ದಿಸಂಸ್ಥೆಗೆ ತಿಳಿಸಿದರು.

ಗುಡ್ ಕೈಗಾರಿಕಾ ಪ್ರದೇಶದ ಪ್ರಸಿದ್ಧ ದೇವಸ್ಥಾನದ ಕಾರಂಜಿಯ ಬಳಿ ತಾನು ಮತ್ತು ಪತಿ ಜಗಳವಾಡಿದ್ದೆವು. ಈ ವೇಳೆ ಐವರು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಅವರ ಪೈಕಿ ಓರ್ವನ ಕೈ ಮತ್ತು ಎದೆಯ ಮೇಲೆ ಹಚ್ಚೆಗಳಿದ್ದವು ಎಂದು ಮಹಿಳೆ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾಳೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News