×
Ad

ಮಧ್ಯಪ್ರದೇಶ | ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ ಪುಣೆ ಪೋಲಿಸರು; 36 ಜನರ ಬಂಧನ, ಶಸ್ತ್ರಾಸ್ತ್ರಗಳು ವಶ

Update: 2025-11-23 21:33 IST

PC : PTI 

ಪುಣೆ,ನ.23: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಉಮರ್ತಿ ಗ್ರಾಮದಿಂದ ಕಾರ್ಯಾಚರಿಸುತ್ತಿದ್ದ ಅಂತರರಾಜ್ಯ ಅಕ್ರಮ ಶಸ್ತ್ರಾಸ್ತ್ರಗಳ ತಯಾರಿಕೆ ಮತ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಪುಣೆ ಪೋಲಿಸರು 36 ಜನರನ್ನು ಬಂಧಿಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ವಾರಗಳಲ್ಲಿ ನಗರದ ವಿವಿಧೆಡೆಗಳಿಂದ ಒಟ್ಟು 21ಪಿಸ್ತೂಲುಗಳನ್ನು ವಶಪಡಿಸಿಕೊಂಡಿದ್ದ ಪುಣೆ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ಅವು ಮಧ್ಯಪ್ರದೇಶದಿಂದ ಪೂರೈಕೆಯಾಗಿದ್ದವು ಎನ್ನುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಮ.ಪ್ರದೇಶ ಪೋಲಿಸರೊಂದಿಗೆ ಉಮರ್ತಿ ಗ್ರಾಮದಲ್ಲಿ ದಾಳಿ ನಡೆಸಿದ ಪುಣೆ ಪೋಲಿಸರು 50 ಅಕ್ರಮ ಶಸ್ತ್ರಾಸ್ತ್ರ ತಯಾರಿಕೆ ಘಟಕಗಳನ್ನು ಧ್ವಂಸಗೊಳಿಸಿದ್ದಾರೆ. 36 ಜನರನ್ನು ಬಂಧಿಸಲಾಗಿದೆ.

ಇದು ಶಸ್ತ್ರಾಸ್ತ್ರಗಳ ಪೂರೈಕೆ ಜಾಲವಾಗಿದೆ. ಅವುಗಳನ್ನು ಪುಣೆಗೆ ಕಳುಹಿಸಿದ್ದ ವ್ಯಕ್ತಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಈ ಜಾಲದಲ್ಲಿ ಹಲವಾರು ವ್ಯಕ್ತಿಗಳು ಭಾಗಿಯಾಗಿದ್ದು,ಈಗಲೂ ವಿಚಾರಣೆ ನಡೆಯುತ್ತಿದೆ ಎಂದು ಜಂಟಿ ಪೋಲಿಸ್ ಆಯುಕ್ತ ರಂಜನ್ ಕುಮಾರ್ ಶರ್ಮಾ ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News