×
Ad

ಮಧ್ಯಪ್ರದೇಶ | ನಾಲ್ವರು ಮುಸುಕುಧಾರಿಗಳಿಂದ 90 ವರ್ಷದ ವೃದ್ಧೆಯ ಅತ್ಯಾಚಾರ

Update: 2026-03-08 14:48 IST

ಸಾಂದರ್ಭಿಕ ಚಿತ್ರ | Photo Credit : freepik

ಖಾಂಡ್ವಾ: ನಾಲ್ವರು ಮುಸುಕುಧಾರಿಗಳು 90 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆಯ ಕುರಿತು ವಿಶೇಷ ತನಿಖಾ ತಂಡ ತನಿಖೆ ಆರಂಭಿಸಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ವೇಳೆ ಗಾಯಗೊಂಡಿರುವ ವೃದ್ಧೆಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗುರುವಾರ ರಾತ್ರಿ ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿಮೀ ದೂರದಲ್ಲಿ ತನ್ನ ಗ್ರಾಮದ ಕೃಷಿ ಭೂಮಿಯಲ್ಲಿನ ಗುಡಿಸಲಿನಲ್ಲಿ ಆ ವೃದ್ಧೆ ಒಂಟಿಯಾಗಿದ್ದಾಗ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಕುರಿತು ಮರುದಿನ ಬೆಳಗ್ಗೆ ಮತ್ತೊಂದು ಗ್ರಾಮದಲ್ಲಿ ವಾಸಿಸುತ್ತಿರುವ ತನ್ನ ಪುತ್ರಿಗೆ ಸಂತ್ರಸ್ತ ಮಹಿಳೆಯು ಮಾಹಿತಿ ನೀಡಿದ್ದಾರೆ. ನಂತರ, ಪುತ್ರಿ ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಕುರಿತು ಪೊಲೀಸರಿಗೆ ಮಾಹಿತಿ ನೀಡುವಂತೆ ಆಸ್ಪತ್ರೆಯ ಸಿಬ್ಬಂದಿಗಳು ಅವರಿಗೆ ಸಲಹೆ ನೀಡಿದ್ದಾರೆ ಎಂದು ಖಾಂಡ್ವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರಾಯ್ ದೂರವಾಣಿ ಕರೆಯ ಮೂಲಕ ತಿಳಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಸಂಬಂಧ ದೂರು ದಾಖಲಾದ ಬಳಿಕ, ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 70ರ ಅಡಿ ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಈ ಅತ್ಯಾಚಾರ ಅಪರಾಧದ ಹಿಂದಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಮೂರು ತಂಡಗಳನ್ನು ನಿಯೋಜಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಸಹಕರಿಸುವವರಿಗೆ 10,000 ರೂ. ಬಹುಮಾನ ನೀಡಲಾಗುವುದು ಎಂದೂ ಪೊಲೀಸರು ಪ್ರಕಟಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News