×
Ad

ಮಧ್ಯಪ್ರದೇಶ: ಅಪ್ರಾಪ್ತ ಬಾಲಕಿಯ ಅತ್ಯಾಚಾರ

Update: 2023-07-30 21:30 IST

Photo: NDTV

ಸಾತ್ನ (ಮಧ್ಯಪ್ರದೇಶ): ಮಧ್ಯಪ್ರದೇಶದ ಸಾತ್ನ ಜಿಲ್ಲೆಯ ಗ್ರಾಮವೊಂದರಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

ಇದು ನಾಲ್ಕು ದಿನಗಳ ಅವಧಿಯಲ್ಲಿ ಈ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಎರಡನೇ ಅತ್ಯಾಚಾರ ಪ್ರಕರಣವಾಗಿದೆ.

ಎರಡನೇ ಪ್ರಕರಣ ಶುಕ್ರವಾರ ನಡೆದಿದೆ. ಬಾಲಕಿಯ ಹೆತ್ತವರು ರಾಮ್‌ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ವಿಜಯ ಸಾಕೇತ್ (19)ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಾಲಕಿಯು ಶುಕ್ರವಾರ ಮಧ್ಯಾಹ್ನ ನಿರ್ಜನ ಸ್ಥಳವೊಂದಕ್ಕೆ ಬಹಿರ್ದೆಸೆಗೆ ಹೋಗಿದ್ದಾಗ, ಆರೋಪಿಯು ಕೊಲ್ಲುವುದಾಗಿ ಬೆದರಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News