×
Ad

ಮಹದೇವಪುರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ : ಇಂದೇ ದಾಖಲೆ ಸಲ್ಲಿಸುವಂತೆ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಸೂಚನೆ

ಮತದಾರರ ಪಟ್ಟಿಯಲ್ಲಿ ಅಕ್ರಮದ ಬಗ್ಗೆ ರಾಹುಲ್‌ ಗಾಂಧಿ ದಾಖಲೆ ಬಿಡುಗಡೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬೆಳವಣಿಗೆ

Update: 2025-08-07 15:52 IST

ರಾಹುಲ್‌ ಗಾಂಧಿ (Photo: PTI)

ಬೆಂಗಳೂರು : ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಬೆನ್ನಲ್ಲೇ ಈ ಕುರಿತು ಇಂದೇ ಪುರಾವೆ ಸಲ್ಲಿಸುವಂತೆ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಸೂಚಿಸಿದೆ.

ಗುರುವಾರ ಪತ್ರಿಕಾಗೋಷ್ಟಿ ನಡೆಸಿದ್ದ ರಾಹುಲ್ ಗಾಂಧಿ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಆರೋಪಿಸಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಭಾರತೀಯ ಚುನಾವಣಾ ಆಯೋಗ (ECI) ರಾಹುಲ್ ಗಾಂಧಿ ಮಾಡಿರುವ ಆರೋಪಗಳ ಕುರಿತು ಪುರಾವೆಗಳನ್ನು ಸಲ್ಲಿಸುವಂತೆ ಕೇಳಿದೆ.

ಮತದಾರರ ಪಟ್ಟಿಯಲ್ಲಿನ ಅಕ್ರಮದ ಬಗ್ಗೆ ಮಾಡಲಾದ ಆರೋಪಗಳ ಕುರಿತು ಪುರಾವೆಗಳನ್ನು ಗುರುವಾರ (ಆಗಸ್ಟ್ 7, 2025)ರಂದು ಪತ್ರಿಕಾಗೋಷ್ಠಿಯಲ್ಲಿ ತೋರಿಸಿದ ಪುರಾವೆಗಳೊಂದಿಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಕಚೇರಿಯು ರಾಹುಲ್ ಗಾಂಧಿಯವರಿಗೆ ಸೂಚಿಸಿದೆ.

ಚುನಾವಣಾ ಆಯೋಗವು ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿ ಚುನಾವಣಾ ಪ್ರಕ್ರಿಯೆಯ ನೈತಿಕತೆಯನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿದ್ದ ರಾಹುಲ್‌ ಗಾಂಧಿ, ಕರ್ನಾಟಕದ ಮತದಾರರ ಪಟ್ಟಿಯಿಂದ ಆಯ್ದ ಭಾಗಗಳನ್ನು ಪ್ರದರ್ಶಿಸಿ ಒಂದೇ ವಿಳಾಸದಲ್ಲಿ ನೂರಾರು ಮತದಾರರು, ಅಸ್ತಿತ್ವವಿಲ್ಲದ ವಿಳಾಸಗಳು ಹಾಗೂ ನಕಲಿ ಹೆಸರುಗಳು ಸೇರಿಸಿರುವುದಾಗಿ ವಿವರಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News