2 ಅಪಘಾತ: 10 ಮಹಾಕುಂಭ ಯಾತ್ರಿಗಳ ಮೃತ್ಯು
Update: 2025-02-11 21:42 IST
PC : PTI
ಜಬಲ್ಪುರ: ಬಿಹಾರ ಮತ್ತು ಮಧ್ಯಪ್ರದೇಶಗಳಲ್ಲಿ ಮಂಗಳವಾರ ಬೆಳಗ್ಗೆ ಸಂಬಂಧಿಸಿದ ಎರಡು ರಸ್ತೆ ಅಪಘಾತಗಳಲ್ಲಿ ಮಹಾ ಕುಂಭಮೇಳಕ್ಕೆ ಪ್ರಯಾಣಿಸುತ್ತಿದ್ದ ಕನಿಷ್ಠ 10 ಯಾತ್ರಿಗಳು ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಿಹೋರ ಸಮೀಪ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಮಂಗಳವಾರ ಬೆಳಗ್ಗೆ ಕುಂಭ ಯಾತ್ರಿಗಳನ್ನು ಒಯ್ಯುತ್ತಿದ್ದ ವಾಹನ ಮತ್ತು ಟ್ರಕ್ಕೊಂದರ ನಡುವೆ ಢಿಕ್ಕಿ ಸಂಭವಿಸಿದಾಗ ಏಳು ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಯಾತ್ರಿಗಳು ಕುಂಭ ಮೇಳದಿಂದ ವಾಪಸಾಗುತ್ತಿದ್ದರು.
ಮಂಗಳವಾರ ಬೆಳಗ್ಗೆ ಬಿಹಾರದ ಕೈಮುರ್ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೂವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಆಟೊ ರಿಕ್ಷಾ ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್ಕೊಂದಕ್ಕೆ ಢಿಕ್ಕಿ ಹೊಡೆದಿದೆ.