×
Ad

ಮಹಾರಾಷ್ಟ್ರ ಸಚಿವ ತಾನಾಜಿ ಸಾವಂತ್ ಸೋದರಳಿಯನ ನಿವಾಸದ ಹೊರಗೆ ಗುಂಡಿನ ದಾಳಿ

Update: 2024-09-13 15:32 IST

ತಾನಾಜಿ ಸಾವಂತ್ | PC : PTI 

ಛತ್ರಪತಿ ಸಂಭಾಜಿನಗರ: ಅಪರಿಚಿತ ದುಷ್ಕರ್ಮಿಗಳು ಮಹಾರಾಷ್ಟ್ರ ಸಚಿವ ತಾನಾಜಿ ಸಾವಂತ್ ಅವರ ಸೋದರಳಿಯ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ಧಾರಾಶಿವ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ಮಧ್ಯಾಹ್ನ ಸುಮಾರು 12.40ರ ವೇಳೆಗೆ ಛತ್ರಪತಿ ಸಂಭಾಜಿನಗರದಿಂದ ಸುಮಾರು 225 ಕಿಮೀ ದೂರವಿರುವ ಸೋನಾರಿ ಗ್ರಾಮದಲ್ಲಿ ನಡೆದಿದೆ.

ಮೋಟರ್ ಸೈಕಲ್ ಮೇಲೆ ಬಂದಿರುವ ಇಬ್ಬರು ದುಷ್ಕರ್ಮಿಗಳು ರಾಜ್ಯ ಆರೋಗ್ಯ ಸಚಿವ ಧನಂಜಯ್ ಸಾವಂತ್ ಅವರ ಸೋದರಳಿಯನ ಮನೆಯ ಮುಂದೆ ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಅಂಬಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನಾವು ಘಟನಾ ಸ್ಥಳದಿಂದ ಗುಂಡುಗಳ ಕವಚಗಳನ್ನು ವಶಪಡಿಸಿಕೊಂಡಿದ್ದು, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News