×
Ad

ಮಹಾರಾಷ್ಟ್ರ: ಅಗ್ನಿ ಅವಘಡ ಮಗು ಸೇರಿದಂತೆ 8 ಮಂದಿ ಮೃತ್ಯು

Update: 2025-05-18 21:44 IST

PC : PTI 

ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ರವಿವಾರ ಅಗ್ನಿ ಅವಘಡ ಸಂಭವಿಸಿ ಮಗು ಹಾಗೂ ಮೂವರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈಯಿಂದ ಸುಮಾರು 400 ಕಿ.ಮೀ. ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಟೆಕ್ಸ್‌ಟೈಲ್ ಮಿಲ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮುಂಜಾನೆ ಸುಮಾರು 3.45ಕ್ಕೆ ಬೆಂಕಿ ಹತ್ತಿಕೊಂಡಿತು ಎಂದು ಅವರು ಹೇಳಿದ್ದಾರೆ.

ಮೃತಪಟ್ಟವರಲ್ಲಿ ಕಾರ್ಖಾನೆಯ ಮಾಲಕ ಹಾಜಿ ಉಸ್ಮಾನ್ ಹಸ್ಸನ್‌ಭಾಯಿ ಮನ್ಸೂರಿ, ಅವರ ಒಂದೂವರೆ ವರ್ಷದ ಮೊಮ್ಮಗ ಸೇರಿದಂತೆ ಕುಟುಂಬದ ಮೂವರು ಸದಸ್ಯರು ಹಾಗೂ ಮೂವರು ಕಾರ್ಮಿಕರು ಸೇರಿದ್ದಾರೆ.

ಬೆಂಕಿಯ ತೀವ್ರತೆಯ ಹಿನ್ನೆಲೆಯಲ್ಲಿ ಅದನ್ನು ನಿಂಯತ್ರಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಗೆ 5ರಿಂದ 6ಗಂಟೆಗಳ ಕಾಲ ಹಿಡಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News