×
Ad

Maharashtra | ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 11 ಮಂದಿಗೆ ಗಾಯ

Update: 2026-03-06 22:15 IST

ಸಾಂದರ್ಭಿಕ ಚಿತ್ರ | Photo Credit : PTI 

ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಶುಕ್ರವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಬಹುತೇಕರು ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 250 ಕಿಮೀ ದೂರದಲ್ಲಿರುವ ಲೋಟೆ ಪರುಶುರಾಮ್ ಎಂಐಡಿಸಿ (ರಾಸಾಯನಿಕ ವಲಯ)ಯಲ್ಲಿರುವ ಡಾ. ಖಾನ್ ಇಂಡಸ್ಟ್ರಿಯಲ್ ಕನ್ಸಲ್ಟೆಂಟ್ಸ್ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಡಾ. ಖಾನ್ ಇಂಡಸ್ಟ್ರಿಯಲ್ ಕನ್ಸಲ್ಟೆಂಟ್ಸ್ ಸಿಲಿಕಾ ಮೂಲದ ವಿಶೇಷ ರಾಸಾಯನಿಕಗಳು ಹಾಗೂ ರಾಸಾಯನಿಕ ಮಧ್ಯವರ್ತಿಗಳನ್ನು ತಯಾರಿಸುವುದರಲ್ಲಿ ಮುಂಚೂಣಿಯಲ್ಲಿದ್ದು, ಉಕ್ಕು, ಜವಳಿ, ಪೇಂಟ್ ಹಾಗೂ ಇಲೆಕ್ಟ್ರಾನಿಕ್ಸ್‌ ನಂತಹ ವೈವಿಧ್ಯಮಯ ಉದ್ಯಮಗಳಿಗೆ ತನ್ನ ರಾಸಾಯನಿಕಗಳನ್ನು ಪೂರೈಸುತ್ತದೆ.

ಈ ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸ್ಫೋಟಕ್ಕೆ ಕಾರಣವೇನು ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News