×
Ad

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ | ಸ್ಪರ್ಧೆಯಿಂದ ಹಿಂದೆ ಸರಿದ ಆಪ್ : ಮಹಾವಿಕಾಸ್ ಅಘಾಡಿ ಪರವಾಗಿ ಕೇಜ್ರಿವಾಲ್ ಪ್ರಚಾರ

Update: 2024-10-26 19:17 IST

ಅರವಿಂದ್ ಕೇಜ್ರಿವಾಲ್ | PTI 

ಹೊಸದಿಲ್ಲಿ : ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ಅದರ ಬದಲು ಮಹಾವಿಕಾಸ್ ಅಘಾಡಿ ಪರವಾಗಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪ್ರಚಾರ ನಡೆಸಲಿದ್ದಾರೆ ಎಂದು ಶನಿವಾರ ಆಪ್ ನಾಯಕ ಸಂಜಯ್ ಸಿಂಗ್ ತಿಳಿಸಿದ್ದಾರೆ.

ಮಹಾವಿಕಾಸ್ ಅಘಾಡಿಯು ಶಿವಸೇನೆ (ಉದ್ಧವ್ ಬಣ), ಎನ್ಸಿಪಿ (ಶರದ್ ಪವಾರ್ ಬಣ) ಹಾಗೂ ಕಾಂಗ್ರೆಸ್ ಅನ್ನು ಒಳಗೊಂಡಿರುವ ಮೈತ್ರಿಕೂಟವಾಗಿದೆ.

ಈ ಕುರಿತು 'ಎಕ್ಸ್' ನಲ್ಲಿ ಪೋಸ್ಟ್ ಮಾಡಿರುವ ರಾಜ್ಯಸಭಾ ಸಂಸದರೂ ಆದ ಸಂಜಯ್ ಸಿಂಗ್, “ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಪರವಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರಚಾರ ನಡೆಸಲಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಪ್ ಸ್ಪರ್ಧಿಸುತ್ತಿಲ್ಲ” ಎಂದು ಬರೆದುಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಚಾರ ನಡೆಸಬೇಕು ಎಂದು ಶಿವಸೇನೆ (ಉದ್ಧವ್ ಬಣ) ಹಾಗೂ ಎನ್ಸಿಪಿ (ಶರದ್ ಪವಾರ್ ಬಣ) ಆಮ್ ಆದ್ಮಿ ಪಕ್ಷವನ್ನು ಸಂಪರ್ಕಿಸಿದ್ದವು. ಇದರೊಂದಿಗೆ ಕೇಜ್ರಿವಾಲ್ ಅವರು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೊರೇನ್ ನೇತೃತ್ವದ ಆಡಳಿತಾರೂಢ ಪಕ್ಷವಾದ ಜೆಎಂಎಂ ಪರವಾಗಿಯೂ ಪ್ರಚಾರ ನಡೆಸಲಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಕ್ಷೇತ್ರಗಳಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News