×
Ad

ಮಹಾರಾಷ್ಟ್ರ | ಮೂವರು ನಕ್ಸಲರ ಹತ್ಯೆ

Update: 2024-05-13 18:02 IST

ಸಾಂದರ್ಭಿಕ ಚಿತ್ರ

ನಾಗಪುರ : ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಗುಪ್ತಚರ ಇಲಾಖೆ ನೀಡಿದ ಮಾಹಿತಿಯಂತೆ, ಕೂಬಿಂಗ್ ನಡೆಸಿದ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರು ಭಮ್ರಗಡ ತಾಲೂಕಿನ ಕಟ್ರಂಘಟ್ಟ ಗ್ರಾಮದ ಬಳಿಯ ಅರಣ್ಯದಲ್ಲಿ ಬೀಡುಬಿಟ್ಟಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಕ್ಸಲರು ದಾಳಿ ನಡೆಸಲು ಸಂಚು ರೂಪಿಸುತ್ತಿರುವ ಬಗ್ಗೆ ವಿಶೇಷ ಭದ್ರತಾ ಪಡೆಯೊಂದಿಗೆ ಅರಣ್ಯದಲ್ಲಿ ಕೂಬಿಂಗ್ ನಡೆಸಲಾಯಿತು ಎಂದು ಎಸ್ಪಿ ನೀಲೋತ್‌ಪಾಲ್‌ ಅವರು ಪಿಟಿಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದರು.

ಕಾರ್ಯಾಚರಣೆಯ ವೇಳೆ ನಕ್ಸಲರು ಮನಬಂದಂತೆ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಎಕೆ–47 ರೈಫೆಲ್, ಎಎನ್‌ಎಸ್‌ಎಸ್‌ ರೈಫಲ್‌ ಸೇರಿದಂತೆ ಕೆಲವು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ನೀಲೋತ್‌ಪಾಲ್‌ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News