×
Ad

ಮಹಾರಾಷ್ಟ್ರ| ಮಹಾ ವಿಕಾಸ್‌ ಅಘಾಡಿ ವಿಪಕ್ಷ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದ ಅಂತಿಮ

Update: 2024-04-09 12:50 IST

Photo: PTI

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 48 ಸ್ಥಾನಗಳಿಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ಒಪ್ಪಂದಕ್ಕೆ ಬಂದಿದೆ ಎಂದು ಈ ಮೈತ್ರಿಕೂಟದ ಹಿರಿಯ ನಾಯಕರು ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಾಜಿ ಸಿಎಂ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್‌ ಪಕ್ಷ 17 ಸ್ಥಾನಗಳಲ್ಲಿ ಹಾಗೂ ಉಳಿದ 10 ಸ್ಥಾನಗಳಲ್ಲಿ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News