ಮಹುವಾ ಮೊಯಿತ್ರಾ ಪ್ರಕರಣದ ತನಿಖೆಯ ಮಾಹಿತಿ ಸೋರಿಕೆ ಮಾಡಿಲ್ಲ: ಈಡಿ
Update: 2024-02-22 21:10 IST
ಮಹುವಾ ಮೊಯಿತ್ರಾ | Photo: PTI
ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ವಿರುದ್ಧದ ತನ್ನ ತನಿಖೆಯ ಕುರಿತ ಸೂಕ್ಷ್ಮ ಹಾಗೂ ಪರಿಶೀಲಿಸದ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿಲ್ಲ ಎಂದು ಜಾರಿ ನಿರ್ದೇಶನಾಲಯ ಗುರುವಾರ ದಿಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ಉಲ್ಲಂಘನೆಯ ಆರೋಪದ ಕುರಿತ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಮಹುವಾ ಮೊಯಿತ್ರಾ ಅವರಿಗೆ ಪೆಬ್ರವರಿ 15ರಂದು ಸಮನ್ಸ್ ಜಾರಿ ಮಾಡಿತ್ತು. ಆದರೆ, ಅವರು ಹಾಜಾರಾಗಿರಲಿಲ್ಲ.
ದಿಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಮಹುವಾ ಮೊಯಿತ್ರಾ ಅವರು ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಸಂಬಂಧಿಸಿ ರಹಸ್ಯ/ಅರೆಬೆಂದ/ ಊಹಾತ್ಮಕ/ದೃಢಪಡಿಸದ ಮಾಹಿತಿಯನ್ನು ಸೋರಿಕೆ ಮಾಡುವ ಮೂಲಕ ಜಾರಿ ನಿರ್ದೇಶನಾಲಯ ತನ್ನ ತನಿಖೆಯ ಸಮಗ್ರತೆಯೊಂದಿಗೆ ರಾಜಿಮಾಡಿಕೊಂಡಿದೆ ಎಂದು ಆರೋಪಿಸಿದ್ದರು.