×
Ad

ಮದ್ಯ ಸೇವಿಸಿ ವಾಹನ ಚಾಲನೆ: ಮಲಯಾಳಂ ನಟ ಬೈಜು ಬಂಧನ

Update: 2024-10-14 11:44 IST

ಬೈಜು ಸಂತೋಷ್ (Photo: X)

ತಿರುವನಂತಪುರಂ: ಮದ್ಯ ಸೇವಿಸಿ ತಮ್ಮ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ, ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದ ಆರೋಪದ ಮೇಲೆ ಮಲಯಾಳಂ ನಟ ಬೈಜು ಸಂತೋಷ್ ರನ್ನು ಸೋಮವಾರ ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಯು ನಿನ್ನೆ ರಾತ್ರಿ 11.45ರ ವೇಳೆಗೆ ತಿರುವನಂತಪುರಂನ ಮ್ಯೂಸಿಯಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೌದಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ ನಡೆದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೆ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು, ಬೈಜು ಸಂತೋಷ್ ರನ್ನು ವಶಕ್ಕೆ ಪಡೆದು, ಸೋಮವಾರ ಮುಂಜಾನೆ 12.30ರ ವೇಳೆಗೆ ಅವರನ್ನು ಬಂಧಿಸಿದ್ದಾರೆ.

ಬೈಜು ಸಂತೋಷ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 281 ಹಾಗೂ ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 185ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಂತರ, ಬೈಜು ಸಂತೋಷ್ ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದ್ದು, ಅವರ ಕಾರನ್ನು ವಶಕ್ಕೆ ಪಡೆಯಲಾಗಿದೆ.

ದ್ವಿಚಕ್ರ ವಾಹನ ಸವಾರನು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News