×
Ad

ನಟಿಗೆ ಕಿರುಕುಳ ಆರೋಪ: ಮಲಯಾಳಂನ ಖ್ಯಾತ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಪ್ರಕರಣ ದಾಖಲು

Update: 2025-01-28 15:27 IST

 ಸನಲ್ ಕುಮಾರ್ ಶಶಿಧರನ್ (en.wikipedia.org)

ಕೊಚ್ಚಿ: ಖ್ಯಾತ ನಟಿಯೊಬ್ಬರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಶಿಧರನ್ ವಿರುದ್ಧ ಹಿಂಬಾಲಿಸುವಿಕೆ, ಕ್ರಿಮಿನಲ್ ಬೆದರಿಕೆ ಹಾಗೂ ಮಾನಹಾನಿ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಏಳಮಕ್ಕರ ಠಾಣೆ ಪೊಲೀಸರು ತಿಳಿಸಿದ್ದಾರೆ.

ನಟಿಯ ಹೆಸರಿನಲ್ಲಿ ಮತ್ತೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಎಂದು ಶಶಿಧರನ್ ಎಫ್ಐಆರ್ ಪ್ರತಿಯನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ, ಮೇ 5, 2022ರಂದು ಮಲಯಾಳಂ ನಟಿ ಮಂಜು ವಾರಿಯರ್ ಅವರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಶಶಿಧರನ್ ಅವರನ್ನು ಪೊಲೀಸರು ಬಂಧಿಸಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ತನ್ನ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ತನ್ನ ಘನತೆಗೆ ಧಕ್ಕೆ ತಂದಿದ್ದಾರೆ ಹಾಗೂ ತನಗೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಶಶಿಧರನ್ ವಿರುದ್ಧ ಮಂಜು ವಾರಿಯರ್ ದೂರು ದಾಖಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News