×
Ad

ನ್ಯಾ.ಸೂರ್ಯಕಾಂತ್‌ ನೇತೃತ್ವದಡಿ ಸಾಂವಿಧಾನಿಕ ಮೌಲ್ಯಗಳು ಇನ್ನಷ್ಟು ಬಲಗೊಳ್ಳಲಿವೆ: ಖರ್ಗೆ ವಿಶ್ವಾಸ

Update: 2025-11-24 20:42 IST

ಮಲ್ಲಿಕಾರ್ಜುನ ಖರ್ಗೆ | PC : PTI 

ಹೊಸದಿಲ್ಲಿ,ನ.24: ನ್ಯಾಯಾಂಗ ವ್ಯವಸ್ಥೆಯು ನಿರ್ಣಾಯಕ ಘಟ್ಟದಲ್ಲಿರುವಾಗ ನ್ಯಾ.ಸೂರ್ಯಕಾಂತ್‌ ಅವರು ಭಾರತದ ಮುಖ್ಯ ನ್ಯಾಯಾಧೀಶರ ಹುದ್ದೆಗೆ ಪದೋನ್ನತಿಗೊಂಡಿದ್ದಾರೆ ಎಂದು ಸೋಮವಾರ ಹೇಳಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಅವರ ನೇತೃತ್ವದಡಿ ಸಾಂವಿಧಾನಿಕ ಮೌಲ್ಯಗಳು ಮತ್ತು ಕಾನೂನಿನ ಆಡಳಿತದಲ್ಲಿ ಸಾರ್ವಜನಿಕ ವಿಶ್ವಾಸ ಹಾಗೂ ಪ್ರತಿಯೊಬ್ಬ ಪ್ರಜೆಗೂ ನ್ಯಾಯದ ಭರವಸೆಯು ಇನ್ನಷ್ಟು ಬಲಗೊಳ್ಳಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ನ್ಯಾ.ಸೂರ್ಯಕಾಂತ್‌ ಅವರು ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

‘ಭಾರತದ 53ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿರುವ ನ್ಯಾ.ಸೂರ್ಯಕಾಂತ್‌ ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ನಮ್ಮ ನ್ಯಾಯ ವ್ಯವಸ್ಥೆಯು ನಿರ್ಣಾಯಕ ಘಟ್ಟದಲ್ಲಿರುವಾಗ ಅವರು 14 ತಿಂಗಳುಗಳ ಅವಧಿಗೆ ಸಿಜೆಐ ಆಗಿ ಪದೋನ್ನತಿ ಪಡೆದಿದ್ದಾರೆ ’ ಎಂದೂ ಖರ್ಗೆ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News