×
Ad

ವಯನಾಡ್ ಭೂಕುಸಿತ: ಗಂಟೆಗಟ್ಟಲೆ ಕೆಸರಿನಲ್ಲಿ ಸಿಲುಕಿಕೊಂಡ ವ್ಯಕ್ತಿ; ಮನಕಲಕುವ ವಿಡಿಯೋ ವೈರಲ್

Update: 2024-07-30 16:29 IST

PC : newindianexpress.com

ವಯನಾಡ್: ಇಂದು ಬೆಳಗ್ಗೆ ಸುಮಾರು 4 ಗಂಟೆಗೆ ಸಂಭವಿಸಿದ ತ್ರಿವಳಿ ಭೂಕುಸಿತದಿಂದ ವಯನಾಡ್ ನಲುಗಿ ಹೋಗಿದೆ. ಭಾರಿ ಮಳೆಯಿಂದಾಗಿ ಹಲವಾರು ಮನೆಗಳು ಹಾಗೂ ಮೃತದೇಹಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ವಯನಾಡ್ ನಾದ್ಯಂತ ನೀರವ ಮೌನ ಆವರಿಸಿದೆ.

ಹೊರ ಜಗತ್ತಿನೊಂದಿಗೆ ಸಂಪರ್ಕ ಕಡಿದುಕೊಂಡಿರುವ ವಯನಾಡ್ ನಲ್ಲಿ ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ. ಈ ನಡುವೆ, ಪ್ರವಾಹಕ್ಕೆ ಸಿಲುಕಿದ ವ್ಯಕ್ತಿಯೊಬ್ಬ, ಗಂಟೆಗಟ್ಟಲೆ ಕೆಸರಿನಲ್ಲಿ ಸಿಕ್ಕಿಕೊಂಡ ಘಟನೆ ವರದಿಯಾಗಿದೆ. ಈ ಘಟನೆಯ ವಿಡಿಯೋ ವೈರಲ್‌ ಆಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಹಲವಾರು ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕುಂಟಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News