×
Ad

ಮಣಿಪುರ | ಚುರಾಚಂದ್ರಪುರ ಬಂದ್, ಸಾಮಾನ್ಯ ಜನಜೀವನ ಅಸ್ತವ್ಯಸ್ತ

Update: 2025-06-20 20:35 IST

ಸಾಂದರ್ಭಿಕ ಚಿತ್ರ | PTI

 

ಇಂಫಾಲ: ವೃದ್ಧ ಕುಕಿ ಮಹಿಳೆಯ ಹತ್ಯೆಯನ್ನು ಪ್ರತಿಭಟಿಸಿ ಬುಡಕಟ್ಟು ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಮಣಿಪುರದ ಚುರಾಚಂದ್ರಪುರ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಬಂದ್‌ ಗೆ ಕರೆ ನೀಡಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಾರುಕಟ್ಟೆಗಳು ಮತ್ತು ವ್ಯವಹಾರ ಸಂಸ್ಥೆಗಳು ಮುಚ್ಚಿದ್ದು, ಮಹಿಳೆಯರು ಸೇರಿದಂತೆ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ(ಐಟಿಎಲ್‌ಎಫ್)ಯ ಕಾರ್ಯಕರ್ತರು ಜಿಲ್ಲೆಯಲ್ಲಿನ ಹಲವಾರು ರಸ್ತೆಗಳನ್ನು ಬಂದ್ ಮಾಡಿದ್ದರಿಂದ ವಾಹನಗಳ ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.

ಗುರುವಾರ ಸಂಜೆ ಭದ್ರತಾ ಪಡೆಗಳು ಮತ್ತು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳ ನಡುವೆ ಗುಂಡಿನ ಕಾಳಗದಲ್ಲಿ ಕುಕಿ ಸಮುದಾಯದ ಹೊಯ್ಕೋಲಿಂಗ್ ಹಾವೊಕಿಪ್ ಎಂಬ ಮಹಿಳೆಯ ಸಾವನ್ನು ವಿರೋಧಿಸಿ ಕಾರ್ಯಕರ್ತರು ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರು.

ಸರಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿದ್ದು, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು.

ಬುಡಕಟ್ಟು ಜನರು ಮತ್ತು ಅವರ ಭೂಮಿಯ ಸುರಕ್ಷತೆಯನ್ನು ಖಚಿತಪಡಿಸಲು ಕೇಂದ್ರ ಸರಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಐಟಿಎಲ್‌ಎಫ್ ಆಗ್ರಹಿಸಿದೆ.

ಈ ನಡುವೆ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿಯೂ ಶುಕ್ರವಾರ ಅಪರಾಹ್ನ ಒಂದು ಗಂಟೆಯಿಂದ 24 ಗಂಟೆಗಳ ಬಂದ್‌ ಗೆ ಕರೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News