ಮಣಿಪುರ: ಬಿಜೆಪಿ ನೇತೃತ್ವದ ಸರಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಮಿತ್ರ ಪಕ್ಷ
Update: 2023-08-06 20:39 IST
Photo: PTI
ಗುವಾಹಟಿ: ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಕೇವಲ ಇಬ್ಬರು ಶಾಸಕರನ್ನು ಹೊಂದಿರುವ ‘ಕುಕಿ ಪೀಪಲ್ಸ್ ಅಲಿಯನ್ಸ್’ ಪಕ್ಷ ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ರಾಜ್ಯಪಾಲೆ ಅನುಸೂಯ ಉಯಿಕೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.