×
Ad

ಮಣಿಪುರ: ಬಿಜೆಪಿಯ ರಾಷ್ಟ್ರೀಯತೆಯ ಪ್ರಚಾರವನ್ನು ಖಂಡಿಸಿದ ಯುರೋಪಿಯನ್‌ ಪಾರ್ಲಿಮೆಂಟ್‌

೨ ತಿಂಗಳುಗಳಿಂದೀಚೆಗೆ ನಡೆಯುತ್ತಿರುವ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ನಿರ್ಣಯ ಮಂಡಿಸಿರುವ ಯುರೋಪಿಯನ್‌ ಪಾರ್ಲಿಮೆಂಟ್‌, ಬಿಜೆಪಿ ನಾಯಕರ ರಾಷ್ಟ್ರೀಯತೆಯ ಪ್ರಚಾರಗಳನ್ನು ಕಠಿಣ ಮಾತುಗಳಲ್ಲಿ ಖಂಡಿಸುವುದಾಗಿ ಹೇಳಿದೆ

Update: 2023-07-13 22:59 IST

Photo: PTI

ಹೊಸದಿಲ್ಲಿ: ೨ ತಿಂಗಳುಗಳಿಂದೀಚೆಗೆ ನಡೆಯುತ್ತಿರುವ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ನಿರ್ಣಯ ಮಂಡಿಸಿರುವ ಯುರೋಪಿಯನ್‌ ಪಾರ್ಲಿಮೆಂಟ್‌, ಬಿಜೆಪಿ ನಾಯಕರ ರಾಷ್ಟ್ರೀಯತೆಯ ಪ್ರಚಾರಗಳನ್ನು ಕಠಿಣ ಮಾತುಗಳಲ್ಲಿ ಖಂಡಿಸುವುದಾಗಿ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ ಸರ್ಕಾರ ಇದು ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರ ಎಂದಿದೆ. ಪ್ರಧಾನಿ ನರೇಂದ್ರ ಮೋದಿಯವರು ಫ್ರಾನ್ಸ್‌ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.

ಫ್ರಾನ್ಸ್‌ನ ಸ್ಟ್ರಾಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಾನವ ಹಕ್ಕುಗಳು, ಪ್ರಜಾಪ್ರಭುತ್ವ ಮತ್ತು ಕಾನೂನಿನ ನಿಯಮಗಳ ಉಲ್ಲಂಘನೆಯ ಪ್ರಕರಣಗಳ ಕುರಿತು ಚರ್ಚೆಯಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಮೇಲಿನ ಚರ್ಚೆಯನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಯಿತು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟವನ್ನು ಖಂಡಿಸಿದ ಯುರೋಪಿಯನ್‌ ಪಾರ್ಲಿಮೆಂಟ್‌ ಬಿಜೆಪಿ ನಾಯಕರ ರಾಷ್ಟ್ರೀಯತೆಯ ಪ್ರಚಾರಗಳನ್ನು ಕಠಿಣ ಶಬ್ಧಗಳಲ್ಲಿ ಖಂಡಿಸುವುದಾಗಿ ಹೇಳಿದೆ.

ಭಾರತದಲ್ಲಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪಾರ್ಲಿಮೆಂಟ್‌, "ಭಾರತದಲ್ಲಿ ಅಲ್ಪಸಂಖ್ಯಾತರು, ನಾಗರಿಕ ಸಮಾಜ, ಮಾನವಹಕ್ಕು ಹೋರಾಟಗಾರರು ಮತ್ತು ಪತ್ರಕರ್ತರು ನಿರಂತರವಾಗಿ ಕಿರುಕುಳ ಎದುರಿಸುತ್ತಿದ್ದಾರೆ. ಮಹಿಳೆಯರು ಅದರಲ್ಲೂ ಪ್ರಮುಖವಾಗಿ ತಮ್ಮ ಬುಡಕಟ್ಟು ಮತ್ತು ಧಾರ್ಮಿಕ ಹಿನ್ನೆಯ ಕಾರಣ ಲೈಂಗಿಕ ಕಿರುಕುಳ, ದೌರ್ಜನ್ಯ ಮತ್ತು ಹಲವು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ" ಎಂದು ಹೇಳಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ ಸರ್ಕಾರ ಇದು ಸಂಪೂರ್ಣವಾಗಿ ದೇಶದ ಆಂತರಿಕ ವಿಚಾರ ಎಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News