×
Ad

ಮಣಿಪುರ:ಇಂಫಾಲದಲ್ಲಿ ಮರುಕಳಿಸಿದ ಹಿಂಸಾಚಾರ,ಎರಡು ಮನೆಗಳಿಗೆ ಬೆಂಕಿ

Update: 2023-10-05 19:50 IST

Photo: PTI

ಇಂಫಾಲ : ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಹಲವಾರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದರು.

ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ನ್ಯೂ ಕೈಥೆಲ್ಮಾಂಬಿ ಎಂಬಲ್ಲಿ ಈ ಘಟನೆ ನಡೆದಿದೆ. ದಾಳಿಯ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪ್ರದೇಶದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ ಎಂದರು. ಭದ್ರತಾ ಪಡೆಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಘಟನೆಯ ಬಳಿಕ ಪ್ರದೇಶದಲ್ಲಿ ಸೇರಿದ್ದ ಮೈತೈ ಮಹಿಳೆಯರ ಗುಂಪು ಮುಂದಕ್ಕೆ ಸಾಗುವುದನ್ನು ಭದ್ರತಾ ಪಡೆಗಳು ತಡೆದಿದ್ದವು. ಹೆಚ್ಚುವರಿ ಭದ್ರತೆಯನ್ನು ಏರ್ಪಡಿಸಲಾಗಿದ್ದು,ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News