×
Ad

ಚತ್ತೀಸ್‌ ಗಢ: ಗುಂಡಿನ ಕಾಳಗ ಶಂಕಿತ ಮಾವೋವಾದಿ ಹತ್ಯೆ

Update: 2025-07-05 21:24 IST

PC : PTI

ರಾಯಪುರ: ಚತ್ತೀಸ್‌ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಶಂಕಿತ ಮಾವೋವಾದಿ ಹತನಾಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಿಷೇಧಿತ ಮಾವೋವಾದಿ ಸಂಘಟನೆಯ ಹಿರಿಯ ಕಾರ್ಯಕರ್ತರು ಬಿಜಾಪುರದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಇರುವ ಕುರಿತು ಖಚಿತ ಮಾಹಿತಿಯ ಹಿನ್ನಲೆಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ಶುಕ್ರವಾರ ಶೋಧ ಕಾರ್ಯಾಚರಣೆಗೆ ತೆರಳಿತು.

ಭದ್ರತಾ ಪಡೆ ಹಾಗೂ ಶಂಕಿತ ಮಾವೋವಾದಿಗಳ ನಡುವೆ ನಿರಂತರ ಗುಂಡಿನ ಕಾಳಗ ನಡೆಯಿತು. ಎನ್ಕೌಂಟರ್ ನಡೆದ ಸ್ಥಳದಲ್ಲಿ ಭದ್ರತಾ ಪಡೆ ಶಶ್ತ್ರಾಸ್ತ್ರಗಳೊಂದಿಗೆ ಶಂಕಿತ ಮಾವೋವಾದಿಯ ಮೃತದೇಹವನ್ನು ಪತ್ತೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News