×
Ad

ಜಾರ್ಖಂಡ್ | ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ :1 ಕೋಟಿ ಬಹುಮಾನ ಘೋಷಿತ ಮಾವೋವಾದಿ ನಾಯಕ ಸೇರಿದಂತೆ 8 ಮಂದಿ ನಕ್ಸಲರ ಹತ್ಯೆ

Update: 2025-04-21 11:32 IST

ಸಾಂದರ್ಭಿಕ ಚಿತ್ರ (PTI)

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಸೋಮವಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಕೋಬ್ರಾ ಕಮಾಂಡೋಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ 8 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೊಕಾರೊ ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಹಿಲ್ಸ್‌ನಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ನಕ್ಸಲರು ಮತ್ತು ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆಗಳು 8 ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವರದಿ ಪ್ರಕಾರ, ಹತ್ಯೆಯಾದ ನಕ್ಸಲರಲ್ಲಿ ಈ ಮೊದಲು 1 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದ್ದ ವಿವೇಕ್ ಎಂಬಾತನು ಸೇರಿದ್ದಾನೆ ಎಂದು ಹೇಳಲಾಗಿದೆ.

ಕೋಬ್ರಾ ಸಿಆರ್‌ಪಿಎಫ್‌ನ ವಿಶೇಷ ಘಟಕವಾಗಿದೆ. ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News