×
Ad

ಮದುವೆ ವಿವಾದ: ಒಂದೇ ಕುಟುಂಬದ 9 ಜನರ ಗುಂಡಿಕ್ಕಿ ಹತ್ಯೆ

Update: 2023-06-28 23:20 IST

ಪೇಷಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಲಾಕಂಡ್ ಜಿಲ್ಲೆಯ ಬಟ್‍ಖೆಲಾ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮದುವೆಯ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ. ರಾತ್ರಿ ವೇಳೆ ಮನೆಗೆ ನುಗ್ಗಿದ ಗುಂಪು, ನಿದ್ದೆಯಲ್ಲಿದ್ದ 9 ಮಂದಿಯನ್ನು ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿರುವುದಾಗಿ ವರದಿಯಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಾಂತೀಯ ಅರೆಸೇನಾ ಪಡೆ ಸ್ಥಳಕ್ಕೆ ಧಾವಿಸಿದ್ದು ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣವನ್ನು ಖಂಡಿಸಿರುವ ಉಸ್ತುವಾರಿ ಮುಖ್ಯಮಂತ್ರಿ ಮುಹಮ್ಮದ್ ಅಝಮ್‍ಖಾನ್ ಆರೋಪಿಗಳ ಪತ್ತೆಕಾರ್ಯ ಚುರುಕುಗೊಳಿಸಲು ಆದೇಶಿಸಿದ್ದು ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News