ತಮಿಳುನಾಡು | ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಪೋಟ: ನಾಲ್ವರು ಮೃತ್ಯು
Update: 2025-07-01 13:54 IST
ಸಾಂದರ್ಭಿಕ ಚಿತ್ರ (PTI)
ಶಿವಕಾಶಿ (ತಮಿಳುನಾಡು): ಸೋಮವಾರ ತಮಿಳುನಾಡಿನ ಶಿವಕಾಶಿ ಬಳಿಯ ಚಿನ್ನಕಾಮನಪಟ್ಟಿಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟು, ಇನ್ನುಳಿದ ಐವರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ವಿರುಧುನಗರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರಿಗೆ ವೈದ್ಯಕೀಯ ಆರೈಕೆ ನೀಡಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿದ ವಿರುಧುನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಣ್ಣನ್, “ಶಿವಕಾಶಿ ಬಳಿಯ ಚಿನ್ನಕಾಮನಪಟ್ಟಿಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟು, ಇನ್ನುಳಿದ ಐವರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ವಿರುಧುನಗರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ” ಎಂದು ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.