×
Ad

ಗುಜರಾತ್ | ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ

Update: 2025-09-14 15:50 IST

Screengrab:X/@PTI_News

ಭರೂಚ್ (ಗುಜರಾತ್): ರವಿವಾರ ಗುಜರಾತ್ ನ ಜಿಐಡಿಸಿ ಪನೋಲಿಯಲ್ಲಿರುವ ಸಾಂಘ್ವಿ ಆರ್ಗಾನಿಕ್ಸ್ ಪ್ರೈ. ಲಿ. ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಾಪಕ ಪ್ರಮಾಣದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಆವರಿಸಿವೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.

PTI ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೊದಲ್ಲಿ ಈ ಕೈಗಾರಿಕಾ ಘಟಕದಿಂದ ಭಾರಿ ಪ್ರಮಾಣದ ಬೆಂಕಿ ಮತ್ತು ಹೊಗೆ ಹೊರ ಬರುತ್ತಿರುವುದು ಕಂಡು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News