ಟಿಎಂಸಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಸಂಸದೆ ಮೌಸಮ್ ನೂರ್
Update: 2026-01-03 23:24 IST
Photo Credit : PTI
ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದೆ ಮೌಸಮ್ ನೂರ್ ತಮ್ಮ ಮಾತೃಪಕ್ಷವಾದ ಕಾಂಗ್ರೆಸ್ ಗೆ ಮರಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಹಾಗೂ ಗುಲಾಂ ಅಹ್ಮದ್ ಮೀರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಂಸದೆ ಮೌಸಮ್ ನೂರ್, “ಪಶ್ಚಿಮ ಬಂಗಾಳಕ್ಕೆ ಬದಲಾವಣೆ ಬೇಕಿದೆ” ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕತ್ವದ ಕುರಿತು ತನಗೆ ಸಂಪೂರ್ಣ ವಿಶ್ವಾಸವಿದೆ. ಪಕ್ಷವು ನನಗೆ ಯಾವ ಜವಾಬ್ದಾರಿ ನೀಡುತ್ತೋ ಅದಕ್ಕೆ ಹೆಗಲು ನೀಡಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.