×
Ad

ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ | ಎಲ್ಲಾ ಐವರು ಆರೋಪಿಗಳ ಬಂಧನ

Update: 2025-10-13 20:47 IST

Photo Credit : ANI

ಕೋಲ್ಕತಾ, ಅ. 9: ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮಬಂಗಾಳ ಪೊಲೀಸರು ಸೋಮವಾರ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದ ಎಲ್ಲಾ ಐದು ಮಂದಿ ಆರೋಪಿಗಳನ್ನು ಬಂಧಿಸಿದಂತೆ ಆಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ಒಡಿಶಾದ ಬಾಲಸೋರೆ ಜಿಲ್ಲೆಯ ಜಾಲೇಶ್ವರದ 23 ವರ್ಷದ ಯುವತಿ ತನ್ನ ಗೆಳೆಯನೊಂದಿಗೆ ಶುಕ್ರವಾರ ರಾತ್ರಿ ಊಟಕ್ಕೆ ತೆರಳಿದ ಸಂದರ್ಭ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು.

‘‘ಯುವತಿಯ ದೂರಿನ ಆಧಾರದಲ್ಲಿ ಮತ್ತಿಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ’’ ಎಂದು ಅನ್ಸೋಲ್-ದುರ್ಗಾಪುರದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಭಿಷೇಕ್ ಗುಪ್ತಾ ತಿಳಿಸಿದ್ದಾರೆ.

‘‘ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳನ್ನು ರವಿವಾರ ಬಂಧಿಸಲಾಗಿತ್ತು’’ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News