×
Ad

ಮಣಿಪುರ ಸಿಎಂ ಶಾಂತಿಗೆ ಮನವಿ ಮಾಡಿದ ಮರುದಿನವೇ ಇಂಫಾಲ್ ಪಶ್ಚಿಮ ಜಿಲ್ಲೆಯ ಹಳ್ಳಿಯ ಮೇಲೆ ಉಗ್ರರ ದಾಳಿ

Update: 2025-01-01 10:39 IST
ಸಾಂದರ್ಭಿಕ ಚಿತ್ರ (PTI)

ಇಂಫಾಲ: ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ಕಡಂಗ್ಬಂಡ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಶಂಕಿತ ಉಗ್ರರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ಪೋಕ್ಪಿ ಜಿಲ್ಲೆಯ ತಮ್ಮ ಗುಡ್ಡಗಾಡು ಪ್ರದೇಶಗಳಿಂದ ಉಗ್ರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಹಲವಾರು ಸುತ್ತು ಗುಂಡು ಹಾರಿಸಿದರು ಎಂದು ತಿಳಿದು ಬಂದಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಇಂಫಾಲ್ ಪಶ್ಚಿಮ ಜಿಲ್ಲೆಯ ಕಡಂಗ್ಬಂಡ್ ಪ್ರದೇಶದ ತಗ್ಗು ಪ್ರದೇಶದ ಮೇಲೆ ಬಾಂಬ್ಗಳನ್ನು ಎಸೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಪಡೆಗಳು ಪ್ರದೇಶಕ್ಕೆ ಧಾವಿಸಿದ್ದರೂ ಪ್ರದೇಶದಲ್ಲಿ ನಿಯೋಜಿಸಲಾದ ಗ್ರಾಮ ಸ್ವಯಂಸೇವಕರು ಗುಂಡು ಸಿಡಿಸಿ, ಬೆದರಿಸಿ ಭದ್ರತಾ ಪಡೆಗಳನ್ನು ವಾಪಸ್ ಕಳುಹಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಿಂದಾಗಿ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದ ಹಲವಾರು ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಪಲಾಯನ ಮಾಡಬೇಕಾಯಿತು ಎಂದು ಅವರು ಹೇಳಿದರು.

ಮೇ 2023 ರಲ್ಲಿ ರಾಜ್ಯದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಕಡಂಗ್ಬಂದ್ ಪ್ರದೇಶವು ಶಂಕಿತ ಉಗ್ರಗಾಮಿಗಳ ಹಲವಾರು ದಾಳಿಗಳಿಗೆ ಸಾಕ್ಷಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News