×
Ad

ಮಹಾರಾಷ್ಟ್ರ | ಸಚಿವ ಸಂಜಯ್ ಶಿರ್ಸಾತ್ ಕೊಠಡಿಯಲ್ಲಿದ್ದ ಬ್ಯಾಗ್‌ನಲ್ಲಿ ನೋಟಿನ ಕಂತೆಗಳು ಪತ್ತೆ : ವೀಡಿಯೊ ವೈರಲ್

Update: 2025-07-11 21:04 IST

Screengrab | PC :  X \ @ss_suryawanshi

ಮುಂಬೈ: ಬಿಜೆಪಿ ನೇತೃತ್ವದ ಮಹಾಯುತಿ ಸರಕಾರ ಮತ್ತೊಂದು ವಿವಾದಕ್ಕೆ ಸಿಲುಕಿದೆ. ರಾಜ್ಯ ಸಾಮಾಜಿಕ ನ್ಯಾಯ ಸಚಿವ ಸಂಜಯ್ ಶಿರ್ಸಾತ್ ಅವರ ಬಳಿಯಿದ್ದ ಬ್ಯಾಗ್‌ನಲ್ಲಿ ನೋಟಿನ ಕಂತೆಗಳಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವಿಡಿಯೊವನ್ನು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹಂಚಿಕೊಂಡಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ಸಂಜಯ್ ರಾವತ್, ನನಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಗ್ಗೆ ಕನಿಕರವಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. “ತಮ್ಮ ವಿಶ್ವಾಸಾರ್ಹತೆ ಚೂರುಚೂರಾಗುತ್ತಿರುವುದನ್ನು ಅವರು ಇನ್ನೆಷ್ಟು ಬಾರಿ ಸುಮ್ಮನೆ ನೋಡುತ್ತಾ ಕೂರುತ್ತಾರೆ? ಇದರ ಮತ್ತೊಂದು ಹೆಸರು ಅಸಹಾಯಕತೆ. ಫಡ್ನವಿಸ್, ಈ ರೋಚಕ ವಿಡಿಯೊವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನೋಡಬೇಕಿದೆ. ಈ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ಈ ವಿಡಿಯೊ ಸಾಕಷ್ಟು ಹೇಳುತ್ತಿದೆ” ಎಂದು ಸಂಜಯ್ ರಾವತ್ ಹೇಳಿದರು.

ಆದರೆ, ಈ ಕುರಿತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಶಿವಸೇನೆಯ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News