"ದೊಡ್ಡ ಕಾರ್ಯಕ್ರಮದಲ್ಲಿ ಸಣ್ಣ ಪುಟ್ಟ ಘಟನೆಗಳು ಸಂಭವಿಸುತ್ತದೆ": ಮಹಾಕುಂಭ ಮೇಳದಲ್ಲಿ ಕಾಲ್ತುಳಿತದ ಬಗ್ಗೆ ಉತ್ತರಪ್ರದೇಶ ಸಚಿವ ಸಂಜಯ್ ನಿಶಾದ್ ಪ್ರತಿಕ್ರಿಯೆ
ಸಂಜಯ್ ನಿಶಾದ್ (Photo: X/@mahamana4u)
ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಭಕ್ತರು ಮೃತಪಟ್ಟ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಉತ್ತರಪ್ರದೇಶದ ಸಚಿವ ಸಂಜಯ್ ನಿಶಾದ್, ದೊಡ್ಡ ಕಾರ್ಯಕ್ರಮದಲ್ಲಿ ಸಣ್ಣಪುಟ್ಟ ಘಟನೆಗಳು ಸಂಭವಿಸುತ್ತದೆ ಎಂದು ಹೇಳಿಕೆಯನ್ನು ನೀಡಿದ್ದಾರೆ.
ಸಂಜಯ್ ನಿಶಾದ್ ಯೋಗಿ ಆದಿತ್ಯನಾಥ್ ಸರಕಾರದಲ್ಲಿ ಮೀನುಗಾರಿಕ ಸಚಿವರಾಗಿದ್ದಾರೆ. ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಬಗ್ಗೆ ಮಾತನಾಡಿದ ಅವರು, ಕುಂಭಮೇಳದಲ್ಲಿ ಮಾಡಿರುವ ವ್ಯವಸ್ಥೆಗಳು ಮತ್ತು ಅಲ್ಲಿ ಸೇರಿರುವ ಜನಸಂದಣಿಯು ಜಗತ್ತಿನಲ್ಲಿ ಬೇರೆಲ್ಲಿಯೂ ಇರಲು ಸಾಧ್ಯವಿಲ್ಲ. ಇಂತಹ ದೊಡ್ಡ ವ್ಯವಸ್ಥೆಗಳು ಮತ್ತು ದೊಡ್ಡ ಜನಸಂದಣಿ ಇರುವಲ್ಲಿ ಸಣ್ಣ ಘಟನೆಗಳು ನಡೆಯುತ್ತವೆ. ಈ ಘಟನೆಯು ನಮಗೆ ದುಃಖಕರವಾಗಿದೆ ಮತ್ತು ಭವಿಷ್ಯದಲ್ಲಿ ಇದು ಸಂಭವಿಸಬಾರದು ಎಂದು ನಾನು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಮಹಾಕುಂಭ ನಗರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು, 60 ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಪ್ರತಿಪಕ್ಷಗಳು ಯೋಗಿ ಆದಿತ್ಯನಾಥ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.