ಮೋದಿ ಸಂಪುಟದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾಗೆ ಸಚಿವ ಸ್ಥಾನ?
Update: 2024-06-09 17:34 IST
JP Nadda | Photo : PTI
ಹೊಸದಿಲ್ಲಿ : ರವಿವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಸಂಪುಟದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿದೆ.
ಹಿಮಾಚಲ ಪ್ರದೇಶದವರಾದ ಜೆ ಪಿ ನಡ್ಡಾಗೆ 2014ರ ಮೋದಿ ಸರಕಾರದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದಲ್ಲಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು. ಬಳಿಕ ಅವರು ಬಿಜೆಪಿ ಅಧ್ಯಕ್ಷ ಹುದ್ದೆ ವಹಿಸಿಕೊಂಡರು. ಬಿಜೆಪಿ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಜೂನ್ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ.