ಗಣರಾಜ್ಯೋತ್ಸವಕ್ಕೆ ಬೈಡನ್ ಗೆ ಆಹ್ವಾನ ನೀಡಿದ ಮೋದಿ
Update: 2023-09-20 20:21 IST
Photo- PTI
ಹೊಸದಿಲ್ಲಿ : ಜಿ20 ಶೃಂಗಸಭೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 26 ರಂದು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್ ಸಿಸಿ ಮುಖ್ಯ ಅತಿಥಿಯಾಗಿದ್ದರು. ಪ್ರತಿ ವರ್ಷ, ಭಾರತವು ತನ್ನ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ವಿಶ್ವ ನಾಯಕರನ್ನು ಆಹ್ವಾನಿಸುತ್ತದೆ. COVID-19 ಸಾಂಕ್ರಾಮಿಕದ ದೃಷ್ಟಿಯಿಂದ 2021 ಮತ್ತು 2022 ರಲ್ಲಿ ಗಣರಾಜ್ಯೋತ್ಸವದ ಆಚರಣೆಯಲ್ಲಿ ಮುಖ್ಯ ಅತಿಥಿಗಳು ಇರಲಿಲ್ಲ.