×
Ad

ಜುಲೈ 21ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ; ಮಾಹಿತಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು

Update: 2025-06-04 16:15 IST

Photo credit: PTI

ಹೊಸದಿಲ್ಲಿ : ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಮಳೆಗಾಲದ ಅಧಿವೇಶನದ ದಿನಾಂಕವನ್ನು ಶಿಫಾರಸು ಮಾಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ್ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವಂತೆ ಈ ಮೊದಲು ವಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ಆದರೆ ಕೇಂದ್ರ ಸರಕಾರ ಇದಕ್ಕೆ ನಿರಾಕರಿಸಿತ್ತು. ಇದರ ಬೆನ್ನಲ್ಲೇ ಕಿರಣ್ ರಿಜಿಜು ಸಂಸತ್ತಿನ ಮಳೆಗಾಲದ ಅಧಿವೇಶನದ ದಿನಾಂಕವನ್ನು ಪ್ರಕಟಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News