×
Ad

ಮುಡಾ ಪ್ರಕರಣ | ಈಡಿಯಿಂದ 142 ಸ್ಥಿರ ಆಸ್ತಿ ಮುಟ್ಟಗೋಲು

Update: 2025-01-17 19:34 IST

ಸಾಂದರ್ಭಿಕ ಚಿತ್ರ (PC: PTI)

ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಾಜು 300 ಕೋಟಿ ರೂ. ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ಈಡಿ)ವು ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರಿನ ಈಡಿ ವಿಭಾಗವು ಈ ಕ್ರಮ ಕೈಗೊಂಡಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ಈಡಿಯು ತಿಳಿಸಿದೆ.

ಪಿಎಂಎಲ್ಎ 2002 ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಈ ಸ್ಥಿರ ಆಸ್ತಿಗಳು ನೋಂದಾಯಿಸಲಾಗಿತ್ತು ಎಂದು ಈಡಿ ತನ್ನ ಪೋಸ್ಟ್ ನಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News