×
Ad

ಮುಂಬೈ: ಅಪಾರ್ಟ್ ಮೆಂಟ್ ನಲ್ಲಿ ಗಗನ ಸಖಿಯ ಭೀಕರ ಹತ್ಯೆ

Update: 2023-09-04 10:45 IST

ಮುಂಬೈ: ಆಘಾತಕಾರಿ ಘಟನೆಯಲ್ಲಿ, ಮಹಾರಾಷ್ಟ್ರದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಮರೋಲ್ ಪ್ರದೇಶದಲ್ಲಿ 23 ವರ್ಷದ ಗಗನಸಖಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ಮಹಿಳೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಹಿಳೆಯ ಮೃತ ದೇಹವು ಆಕೆಯ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದ್ದು, ಮೃತ ಮಹಿಳೆಯು ತನ್ನ ಸಹೋದರಿ ಹಾಗೂ ಸ್ನೇಹಿತನೊಂದಿಗೆ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು.

ಆಕೆಯ ಸಹೋದರಿ ಹಾಗೂ ಸ್ನೇಹಿತ ಇಬ್ಬರೂ ಸದ್ಯ ನಗರದಲ್ಲಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೊವಾಯಿ ಪೊಲೀಸ್ ಠಾಣೆ ಮತ್ತು ಅಪರಾಧ ವಿಭಾಗದ ಪೊಲೀಸರು ಸ್ಥಳದಲ್ಲಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News