×
Ad

ಹೊಸ ವರ್ಷದ ಸಂಭ್ರಮಾಚರಣೆಯಂದು ಬಾಂಬ್ ಸ್ಫೋಟ ನಡೆಸುವ ಬೆದರಿಕೆ: ಮುಂಬೈನಲ್ಲಿ ಕಟ್ಟೆಚ್ಚರ

Update: 2023-12-31 12:10 IST

ಸಾಂದರ್ಭಿಕ ಚಿತ್ರ (PTI)

ಮುಂಬೈ: ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆ ನಡೆದಿರುವಾಗಲೇ ಮುಂಬೈನಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಒಡ್ಡಿರುವುದರಿಂದ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ಎಂದು indiatoday.in ವರದಿ ಮಾಡಿದೆ.

ಈ ಕರೆಯು ಶನಿವಾರ ಆರು ಗಂಟೆಯ ವೇಳೆಗೆ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬಂದಿದೆ.

ವಿವರಗಳ ಪ್ರಕಾರ, ಅಪರಿಚಿತ ವ್ಯಕ್ತಿಯು, “ಮುಂಬೈನಲ್ಲಿ ಬಾಂಬ್ ಸ್ಫೋಟಗಳು ನಡೆಯಲಿವೆ” ಎಂದು ಬೆದರಿಕೆ ಹಾಕಿದ್ದಾನೆ. ಕರೆಯ ಬೆನ್ನಿಗೇ ಹಲವಾರು ತಪಾಸಣೆಗಳನ್ನು ನಡೆಸಲಾಯಿತಾದರೂ ಯಾವುದೇ ಸಂಶಯಾಸ್ಪದ ವಸ್ತು ಕಂಡು ಬರಲಿಲ್ಲ ಎಂದು ಮುಂಬೈ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಈ ನಡುವೆ, ಹೊಸ ವರ್ಷದ ಸಂಭ್ರಮಾಚರಣೆಯನ್ನು ಪರಿಗಣಿಸಿ, ಮುಂಬೈ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News