×
Ad

ತಮಿಳುನಾಡು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ನೈನಾರ್‌ ನಾಗೇಂದ್ರನ್‌ ಆಯ್ಕೆ

Update: 2025-04-11 17:22 IST

ನೈನಾರ್ ನಾಗೇಂದ್ರನ್ (Photo credit: X)

ಚೆನ್ನೈ: ತಮಿಳುನಾಡು ಬಿಜೆಪಿಯ ನೂತನ ಅಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ರಿಂದ ತೆರವಾದ ಸ್ಥಾನಕ್ಕೆ ನಾಗೇಂದ್ರನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಕೆ. ಅಣ್ಣಾಮಲೈ ಅವರು ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಹಾಗೂ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿ ನಾಗೇಂದ್ರನ್ ಅವರಾದ್ದರಿಂದ ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News