National Herald Case: ಸೋನಿಯಾ, ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್ ನೀಡಿದ ದಿಲ್ಲಿ ನ್ಯಾಯಾಲಯ
Update: 2025-12-16 11:49 IST
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ (Photo: PTI)
ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಅವರ ವಿರುದ್ಧದ ಹಣ ವರ್ಗಾವಣೆ ಪ್ರಕರಣವನ್ನು ಪರಿಗಣಿಸಲು ದಿಲ್ಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಥವಾ ಪಿಎಂಎಲ್ಎ ಅಡಿಯಲ್ಲಿ ಸಲ್ಲಿಸಿದ ದೂರನ್ನು ಪ್ರಥಮ ಮಾಹಿತಿ ವರದಿ ಇಲ್ಲದೆ ಪರಿಗಣಿಸಲಾಗುವುದಿಲ್ಲ ಎಂದು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಹೇಳಿದ್ದಾರೆ.
ಈ ಪ್ರಕರಣದಲ್ಲಿ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಈಗಾಗಲೇ ಎಫ್ಐಆರ್ ದಾಖಲಿಸಿದೆ. ಆದರೆ ಈಡಿಯ ಸಲ್ಲಿಕೆಯ ಮೇಲೆ ತೀರ್ಪು ನೀಡುವುದು 'ಅಕಾಲಿಕ ಮತ್ತು ಅವಿವೇಕದ ಕ್ರಮವಾಗಿರುತ್ತದೆ ಎಂದು ನ್ಯಾಯಾಲಯ ಗಮನಸೆಳೆದಿದೆ.