×
Ad

ಎನ್ ಡಿ ಎ ಸರಕಾರವು ಸಂವಿಧಾನಕ್ಕೆ ಎಂದಿಗೂ ಧಕ್ಕೆ ತರುವುದಿಲ್ಲ : ಅಮಿತ್ ಶಾ

Update: 2024-04-29 19:56 IST

ಅಮಿತ್ ಶಾ | PC : PTI

ಹೊಸದಿಲ್ಲಿ : ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಸಂವಿಧಾನಕ್ಕೆ ಎಂದಿಗೂ ಹಾನಿ ಮಾಡುವುದಿಲ್ಲ. ಪ್ರತಿಪಕ್ಷಗಳು ಮತದಾರರನ್ನು ದಾರಿ ತಪ್ಪಿಸುತ್ತಿವೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ ಎಂದು ndtv ವರದಿ ಮಾಡಿದೆ.

ತಿರುಚಿದ ವೀಡಿಯೊ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದ ನಂತರ, ಗೃಹಸಚಿವರು ಪ್ರತಿಪಕ್ಷಗಳ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಅಮಿತ್ ಶಾ ಅವರು ತೆಲಂಗಾಣದಲ್ಲಿ ಧಾರ್ಮಿಕ ಆಧಾರದಲ್ಲಿ ಮುಸ್ಲಿಂ ಕೋಟಾ ಮೀಸಲಾತಿಯನ್ನು ಮಾತ್ರ ರದ್ದು ಮಾಡುವ ವಿಚಾರವಾಗಿ ಮಾತನಾಡಿದ್ದರು. ಆದರೆ ತಿರುಚಿದ ವೀಡಿಯೊದಲ್ಲಿ ಎಲ್ಲಾ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಹೇಳಿದಂತೆ ತಿರುಚಲಾಗಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಳ್ಳುವ ಮುನ್ನ ಬಿಜೆಪಿಯು ಮುಸ್ಲಿಂ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News