ನೀಟ್-ಯುಜಿ ಪರೀಕ್ಷೆ ಅಕ್ರಮ | JNUSUನಿಂದ ಪ್ರತಿಭಟನೆ
PC : PTI
ಹೊಸದಿಲ್ಲಿ, ಜೂ. 26: ನೀಟ್ ವೈಫಲ್ಯದ ವಿರುದ್ಧ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಒಕ್ಕೂಟ (JNUSU) ಇಲ್ಲಿನ ಜಂತರ್ ಮಂತರ್ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಎನ್ ಟಿ ಎ ಯನ್ನು ರದ್ದುಗೊಳಿಸುವಂತೆ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಎಡಪಂಥ ಬೆಂಬಲಿತ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಶನ್ (ಎಐಎಸ್ಎ) ಹಾಗೂ ದಿಲ್ಲಿ ವಿಶ್ವವಿದ್ಯಾನಿಲಯದ ಕ್ರಾಂತಿಕಾರಿ ಯುವ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳಿಗೆ ಸೇರಿದ ಅಸಂಖ್ಯಾತ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿ, ಎನ್ ಟಿ ಎಯನ್ನು ರದ್ದುಗೊಳಿಸಿ ಎಂದು ಬರೆದ ಭಿತ್ತಿ ಪತ್ರ ಹಾಗೂ ಪ್ರದರ್ಶನಾ ಫಲಕಗಳನ್ನು ವಿದ್ಯಾರ್ಥಿಗಳು ಹಿಡಿದುಕೊಂಡಿದ್ದರು.
ನೀಟ್-ಯುಜಿ ಮರು ಪರೀಕ್ಷೆ ನಡೆಸುವಂತೆ ಹಾಗೂ ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಪಿಎಚ್ಡಿ ಪ್ರವೇಶಕ್ಕೆ ಎನ್ ಟಿ ಎ ನಡೆಸುವ ಪರೀಕ್ಷೆಯನ್ನು ಕೂಡ ರದ್ದುಗೊಳಿಸುವಂತೆ JNUSU ಆಗ್ರಹಿಸಿತು.