×
Ad

ನೀಟ್-ಯುಜಿ ಹಗರಣ | ತಲೆ ಬೋಳಿಸಿಕೊಂಡು ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

Update: 2024-07-03 19:19 IST

PC : PTI

ಹೊಸದಿಲ್ಲಿ: ನೀಟ್-ಯುಜಿ ಪರೀಕ್ಷಾ ಹಗರಣದ ವಿರುದ್ದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ತಮ್ಮ ತಲೆ ಬೋಳಿಸಿಕೊಂಡು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಸರಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮೋದಿ ವಿರೋಧಿ ಘೋಷಣೆಗಳನ್ನು ಕೂಗಿದರು.

ಸಮಾಜವಾದಿ ಛಾತ್ರ ಸಭಾ ಹಾಗೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐನೊಂದಿಗೆ ಎಡಪಕ್ಷ ಬೆಂಬಲಿತ ಇಂಡಿಯನ್ ಸ್ಟೂಡೆಂಟ್ಸ್ ಅಸೋಸಿಯೇಷನ್, ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಶನ್, ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯರು ಮೆರವಣಿಗೆ ನಡೆಸಲು ಜಂತರ್ ಮಂತರ್‌ನಲ್ಲಿ ಸೇರಿದ್ದರು.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವನ್ನು ವಿಸರ್ಜಿಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪ್ರವೇಶ ಪರೀಕ್ಷೆಗಳನ್ನು ವಿಕೇಂದ್ರೀಕರಣಗೊಳಿಸಬೇಕು ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಈ ವಿದ್ಯಾರ್ಥಿ ಸಂಘಟನೆಗಳು ಸಂಸತ್ತಿನತ್ತ ಮೆರವಣಿಗೆ ಹೊರಡಲು ಉದ್ದೇಶಿಸಿದ್ದವು.

ಆದರೆ, ಜಂತರ್ ಮಂತರ್ ಬಳಿ ಭಾರಿ ಪ್ರಮಾಣದ ಪೊಲೀಸ್ ಸಿಬ್ಬಂದಿಗಳು ಹಾಗೂ ತಡೆಗೋಡೆಗಳನ್ನು ಹಾಕಿದ್ದರಿಂದ ವಿದ್ಯಾರ್ಥಿ ಸಂಘಟನೆಗಳು ಸಂಸತ್ತಿನತ್ತ ಮೆರವಣಿಗೆ ನಡೆಸಲು ಸಾಧ್ಯವಾಗಲಿಲ್ಲ.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಆಯೋಜಿಸಿದ್ದ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಕೆಲವು ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದರಿಂದ, ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ನೂತನ ಕ್ರಿಮಿನಲ್ ಕಾನೂನುಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News