×
Ad

ಹೊಸದಿಲ್ಲಿ| ಅಕ್ರಮ ಶಸ್ತ್ರಾಸ್ತ್ರ ತಯಾರಿಕೆ, ವಿತರಣೆ ಜಾಲ ಪತ್ತೆ: ಐವರ ಬಂಧನ

Update: 2026-01-16 22:05 IST

ಸಾಂದರ್ಭಿಕ ಚಿತ್ರ


ಹೊಸದಿಲ್ಲಿ, ಜ.16: ದಿಲ್ಲಿ-ರಾಷ್ಟ್ರ ರಾಜಧಾನಿ ವಲಯ, ಉತ್ತರಪ್ರದೇಶ ಮತ್ತು ಹರ್ಯಾಣದಲ್ಲಿ ಸಕ್ರಿಯರಾಗಿರುವ ಗ್ಯಾಂಗ್‌ಸ್ಟರ್‌ಗಳು ಮತ್ತು ಭಯಾನಕ ಕ್ರಿಮಿನಲ್‌ಗಳಿಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿತ್ತು ಎನ್ನಲಾದ ಅಕ್ರಮ ಶಸ್ತ್ರಾಸ್ತ್ರ ತಯಾರಿಕೆ ಮತ್ತು ಪೂರೈಕೆ ಜಾಲವೊಂದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಅಪರಾಧಗಳನ್ನು ಎಸಗಿರುವ ಆರೋಪ ಎದುರಿಸುತ್ತಿರುವ ಐವರು ಕ್ರಿಮಿನಲ್‌ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು. ಗಣರಾಜ್ಯೋತ್ಸವ ದಿನಾಚರಣೆಗೆ ಮುನ್ನ, ಅಕ್ರಮ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಹತ್ತಿಕ್ಕುವುದಕ್ಕಾಗಿ ನಡೆಸಲಾದ ವಿಶೇಷ ಅಭಿಯಾನದ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಬಂಧಿತರಿಂದ 20 ಆಧುನಿಕ ಪಿಸ್ತೂಲ್‌ಗಳು, 12 ಸಜೀವ ಕಾರ್ಟ್ರಿಜ್‌ಗಳು ಹಾಗೂ ಶಸ್ತ್ರಾಸ್ತ್ರಗಳ ತಯಾರಿಕೆಗೆ ಬಳಸಲಾಗುವ ಭಾರೀ ಪ್ರಮಾಣದ ಯಂತ್ರಗಳು ಮತ್ತು ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಜನವರಿ 4ರಂದು ಪೊಲೀಸರು ಕಪಶೇರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ದಿಲ್ಲಿಯ ಪಾಲಮ್ ನಿವಾಸಿ ಭರತ್ ಯಾನೆ ಭರು ಎಂಬಾತನನ್ನು ವಶಕ್ಕೆ ಪಡೆದರು. ಅವನಿಂದ ಒಂದು ದೇಶಿ ನಿರ್ಮಿತ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News