ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ
Update: 2023-12-04 10:00 IST
Photo credit: telanganatoday.com
ಮೇದಕ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪತನಗೊಂಡಿದೆ.
ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೈಲಟ್ ವಿಮಾನದಿಂದ ಹೊರಗೆ ಜಿಗಿದಿದ್ದಾರೆಯೇ ಎಂಬುದು ಪೊಲೀಸರಿಗೆ ಖಚಿತವಾಗಿಲ್ಲ.