×
Ad

ಗುಜರಾತ್‍ ನಲ್ಲಿ ಭಾರಿ ಮಳೆ: ನೂರಾರು ಜನರ ಸ್ಥಳಾಂತರ, ಜನಜೀವನ ಅಸ್ತವ್ಯಸ್ತ

Update: 2024-07-25 13:30 IST

Photo: PTI

ಅಹಮದಾಬಾದ್: ನದಿಗಳು ಉಕ್ಕಿ ಹರಿಯುತ್ತಿರುವುದರಿಂದ, ಅಣೆಕಟ್ಟುಗಳು ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜೂನ್ 24ರಂದು ಧಾರಾಕಾರ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವುದರಿಂದ ನೂರಾರು ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಬೆಳಗಿನಿಂದಲೇ ಸೂರತ್, ಭರೂಚ್ ಹಾಗೂ ಆನಂದ್ ನಂತಹ ದಕ್ಷಿಣ ಮತ್ತು ಕೇಂದ್ರ ಗುಜರಾತ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದ್ದರಿಂದ ದೈನಂದಿನ ಜನಜೀವನ ಅಸ್ತವ್ಯಸ್ತಗೊಂಡಿತು. ಹೀಗಾಗಿ ಜಿಲ್ಲಾಡಳಿತಗಳು ಕೆಲ ಭಾಗಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

ಕೆಲ ಪ್ರದೇಶಗಳಲ್ಲಿ ರೈಲು ಸೇವೆಗಳ ಮೇಲೂ ವ್ಯತಿರಿಕ್ತ ಪರಿಣಾಮವುಂಟಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News